ವರ್ಕ್ ಫ್ರಂ ಹೋಮ್‍ಗೆ ಆದೇಶಿಸಿದ ಸರ್ಕಾರ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ, ಸ್ವಾಯತ್ತ ಸಂಸ್ಥೆ, ನಿಗಮ, ಮಂಡಳಿ ಕಚೇರಿಗಳಲ್ಲಿ ಕಾರ್ಯನಿರ್ವವಹಿಸುತ್ತಿರುವ ದೃಷ್ಠಿ ದೋಷ ಹಾಗೂ ಇತರೆ ವಿಕಲಚೇತನ ಹೊಂದಿರುವ ಅಧಿಕಾರಿ, ಸಿಬ್ಬಂದಿಗಳಿಗೆ ಮನೆಯಿಂದಲೇ ಕಾರ್ಯನಿರ್ವಹಿಸುವಂತೆ ಸೂಚಿಸಿ, ರಾಜ್ಯ ಸರ್ಕಾರ ಆದೇಶಿಸಿದೆ.

ಈ ಕುರಿತಂತೆ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ಕೊರೋನಾ ವೈರಸ್ ಸಾಂಕ್ರಾಮಿಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಭಾರತ ಸರ್ಕಾರದ ಆರೋಗ್ಯ ಮಂತ್ರಾಲಯ ಮಾರ್ಗಸೂಚಿಗಳನ್ವಯ, ಈ ಹಿಂದಿನ ಮಾರ್ಗಸೂಚಿಯನ್ನು ಮುಂದುವರೆಸುತ್ತಾ, ಕರ್ನಾಟಕ ಸರ್ಕಾರ ಸಚಿವಾಲಯ ಹಾಗೂ ಎಲ್ಲಾ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ದೃಷ್ಠಿ ದೋಷ ಹಾಗೂ ಇತರೆ ವಿಕಲಚೇತನ ಅಧಿಕಾರಿ, ನೌಕರರು ಕಚೇರಿಗೆ ಹಾಜರಾಗಿ, ಕರ್ತವ್ಯ ನಿರ್ವಹಿಸುವುದು ಕಷ್ಟ ಸಾಧ್ಯವೆಂದು ಪರಿಭಾವಿಸಲಾಗಿದೆ.

NEWS DESK

TIMES OF BENGALURU