ಬೆಂಗಳೂರಿನಲ್ಲಿ 3728 ಮಂದಿಗೆ ಸೋಂಕು

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇನ್ನು ಸೋಮವಾರ ಬರೋಬ್ಬರಿ 5279 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, ಇದರೊಂದಿಗೆ ಸೋಂಕಿತರ ಸಂಖ್ಯೆ 10,20,434ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ 32 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,657ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರಿನಲ್ಲಿ 3728 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,50,759ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 18 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

NEWS DESK

TIMES OF BENGALURU