ಬೆಂಗಳೂರು: ಕೋವಿಡ್ ನಿಯಂತ್ರಣಕ್ಕಾಗಿ ನಗರದಾದ್ಯಂತ ಕೋವಿಡ್ ನಿಯಮಾವಳಿ ಜಾರಿಯಲ್ಲಿದ್ದು, ಇದರನ್ವಯ ಏ.20ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಈ ವೇಳೆ ನಗರದಲ್ಲಿ ಯಾವುದೇ ಗುಂಪು ಅಥವಾ ಸಂಘಟನೆಗಳು ಪ್ರತಿಭಟನೆ, ಧರಣಿ, ರ್ಯಾಲಿ, ಮುಷ್ಕರ ನಡೆಸುವಂತಿಲ್ಲ.
ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದೂ ಎಚ್ಚರಿಸಿದ್ದಾರೆ. ಧಾರ್ಮಿಕ ಸ್ಥಳಗಳಲ್ಲಿ ಗುಂಪು ಪ್ರಾರ್ಥನೆಗೆ ಅವಕಾಶ ಇರುವುದಿಲ್ಲ. ಕಾರ್ಯಕ್ರಮಗಳಲ್ಲೂ ಹೆಚ್ಚು ಜನ ಸೇರುವಂತಿಲ್ಲ. ಈಜುಕೊಳ ಹಾಗೂ ಜಿಮ್ಗಳಲ್ಲಿ ಶೇ 50 ಮಂದಿಯೊಂದಿಗೆ ಕಾರ್ಯನಿರ್ವಹಿಸಬೇಕು. ಪಬ್, ಬಾರ್, ಕ್ಲಬ್ ಹಾಗೂ ರೆಸ್ಟೋರೆಂಟ್ಗಳಲ್ಲಿ ಶೇ 50ರಷ್ಟು ಮಂದಿಗೆ ಆಸನ ವ್ಯವಸ್ಥೆ ಇರಬೇಕು. ಸೂಚಿತ ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ, ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ ಹಾಗೂ ಐಪಿಸಿ ಸೆಕ್ಷನ್ 188ರಡಿ ಪ್ರಕರಣ ದಾಖಲಿಸಲಾಗುವುದು ಎಂದು ಅವರು ಆದೇಶದಲ್ಲಿ ಎಚ್ಚರಿಸಿದ್ದಾರೆ.
NEWS DESK
TIMES OF BENGALURU