ನಗರದಲ್ಲಿ ಹೊಸ ದಾಖಲೆ ಬರೆದ ಕೊರೊನಾ

ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾವೈರಸ್ ಹರಡುವಿಕೆಯು ಕಡಿವಾಣ ಕಳೆದುಕೊಳ್ಳುತ್ತಿದೆ. ಪ್ರತಿನಿತ್ಯ ದಾಖಲಾಗುತ್ತಿರುವ ಸೋಂಕಿತ ಪ್ರಕರಣಗಳ ಸಂಖ್ಯೆ ಹೊಸ ದಾಖಲೆಗಳನ್ನು ಬರೆಯುತ್ತಿದ್ದು, ರಾಜ್ಯದ ಜನರ ಎದೆಯಲ್ಲಿ ನಡುಕ ಹುಟ್ಟಿಸುವಂತೆ ಮಾಡಿದೆ. ಕರ್ನಾಟಕದಲ್ಲಿ ಒಟ್ಟು 1026584ಕ್ಕೆ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿವೆ.

ಈ ಪೈಕಿ 968762 ಸೋಂಕಿತರು ಗುಣಮುಖರಾಗಿದ್ದು, ಸೋಂಕಿಗೆ ಈವರೆಗೂ 12696 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ ರಾಜ್ಯದಲ್ಲಿ 45107 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.ರಾಜ್ಯದಲ್ಲಿ ಒಟ್ಟು 6150 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬೆಂಗಳೂರು ಗ್ರಾಮಾಂತರ 80, ಬೆಂಗಳೂರು 4266 ಅತಿ ಹೆಚ್ಚು ಪ್ರಕರಣಗಳು ಕಂಡಿ ಬರುತ್ತಿವೆ.

NEWS DESK

TIMES OF BENGALURU