ಮಾರ್ಚ್ ತಿಂಗಳ ವೇತನ ತಡೆಗೆ ನಿರ್ಧಾರ

ಬೆಂಗಳೂರು : ಇಂದು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಪ್ರಯಾಣಿಕರು ಸಾರಿಗೆ ಬಸ್ ಇಲ್ಲದೇ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲೇ ರಾಜ್ಯ ಸರ್ಕಾರ ಮುಷ್ಕರ ನಿರತ ಸಾರಿಗೆ ನೌಕರರ ಮಾರ್ಚ್ ತಿಂಗಳ ವೇತನ ತಡೆಗೆ ನಿರ್ಧರಿಸಿದೆ ಎನ್ನಲಾಗಿದೆ. ಈ ಮೂಲಕ ಮುಷ್ಕರ ನಡೆಸುತ್ತಿರುವಂತ ಸಾರಿಗೆ ನೌಕರರಿಗೆ ಬಿಗ್ ಶಾಕ್ ನೀಡೋದಕ್ಕೆ ಮುಂದಾಗಿದೆ. ಮುಷ್ಕರದಿಂದಾಗಿ ಬಸ್ ಇಲ್ಲದೇ ಪ್ರಯಾಣಿಕರು ಪರದಾಡುವಂತ ಸ್ಥಿತಿ ಎದುರಾಗಿದೆ.

NEWS DESK

TIMES OF BENGALURU