ಪ್ರಿಯಕರನ ಮನೆಗೆ ಬೆಂಕಿ ಇಟ್ಟ ಯುವತಿ ಕುಟುಂಬಸ್ಥರು

ಬೆಂಗಳೂರು: ಪ್ರೇಮಿಗಳಿಬ್ಬರು ಮನೆ ಬಿಟ್ಟು ಓಡಿ ಹೋಗಿದ್ದಕ್ಕೆ ಸಿಟ್ಟಿಗೆದ್ದ ಯುವತಿಯ ಕುಟುಂಬಸ್ಥರು ಯುವಕನ ಮನೆಗೆ ಬೆಂಕಿ ಇಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ ತಾಲೂಕಿನ ಗೋಣಿಘಟ್ಟಪುರದಲ್ಲಿ ಸಂಭವಿಸಿದೆ. ಪರಸ್ಪರ ಪ್ರೀತಿಸುತ್ತಿದ್ದ ಯುವಕ-ಯುವತಿ ಬೇರಡೆಗೆ ಓಡಿ ಹೋಗಿದ್ದಾರೆ. ಮಾರತಳ್ಳಿ ಪೊಲೀಸ್ ಠಾಣೆಯಲ್ಲಿ ಪಾಲಕರು ದೂರು ದಾಖಲಿಸಿದ್ದರು.

ಮಗಳನ್ನು ಪ್ರಿಯಕರನೊಂದಿಗೆ ಓಡಿ ಹೋಗಿದ್ದಕ್ಕೆ ಆಕೆಯ ಸಂಬಂಧಿಕರು ಇಂದು (ಬುಧವಾರ) ಬೆಳಗ್ಗೆ ಪ್ರಿಯಕರನ ಮನೆಗೆ ಬೆಂಕಿ ಹಚ್ಚಿದ್ದಾರೆ. ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಈ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲವಾದ್ದರಿಂದ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಮನೆಯಲ್ಲಿದ್ದ ವಸ್ತು, ವಾಹನಗಳು ಬೆಂಕಿಗೆ ಆಹುತಿಯಾಗಿವೆ.

NEWS DESK

TIMES OF BENGALURU