ವಿದ್ಯುತ್ ತಂತಿ ತಗುಲಿ ನಾಲ್ವರು ಸಾವು

ಬೆಂಗಳೂರು : ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಇಂಡ್ಳಬೆಲೆಯಲ್ಲಿ ವಿದ್ಯುತ್ ತಂತಿ ತಗುಲಿ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಗೃಹ ಪ್ರವೇಶದ ಕಾರ್ಯಕ್ರಮಕ್ಕೆ ಲೈಟಿಂಗ್ ಅಳವಡಿಕೆ ವೇಳೆ ವಿದ್ಯುತ್ ಪ್ರವಹಿಸಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂಡ್ಳಬೆಲೆಯಲ್ಲಿಯಲ್ಲಿ ನಡೆದಿದೆ.

ಮೃತರನ್ನು ಆಕಾಶ್ (30), ಮಹಾದೇವ್ (35), ವಿಷಕಂಠ (35), ವಿಜಯ್ (30) ಎಂದು ಗುರುತಿಸಲಾಗಿದೆ. ನಾಳೆ ಗೃಹಪ್ರವೇಶವಿರುವ ಅಪಾರ್ಟ್ ಮೆಂಟ್‍ನಲ್ಲಿ ಲೈಟಿಂಗ್ ಅಳವಡಿಕೆ ವೇಳೆ ವಿದ್ಯುತ್ ಕಂಬದಿಂದ ತಂತಿ ಎಳೆಯುವಾಗ ಈ ದುರ್ಘಟನೆ ನಡೆದಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

NEWS DESK

TIMES OF BENGALURU