ಬೆಂಗಳೂರು : ಚಂದನವನದ ನಟ ಪುನೀತ್ ರಾಜಕುಮಾರ್ ಮೊದಲ ಡೋಸ್ ಕೋವಿಡ್ ಲಸಿಕೆ ಪಡೆದಿದ್ದಾರೆ. ಅಪ್ಪು ಇಂದು (ಏ.7) ಆರೋಗ್ಯ ಕೇಂದ್ರಕ್ಕೆ ತೆರಳಿ ಲಸಿಕೆ ಪಡೆದಿದ್ದಾರೆ. ಕೋವಿಡ್ ಲಸಿಕೆ ಪಡೆದಿರುವ ಕುರಿತು ಟ್ವಿಟರ್ನಲ್ಲಿ ಹೇಳಿಕೊಂಡಿರುವ ಪುನೀತ್, 45 ವರ್ಷ ವಯಸ್ಸಿನವರು ಹಾಗೂ ಅದಕ್ಕೂ ಮೇಲ್ಪಟ್ಟವರು ಕೋವಿಡ್ ಲಸಿಕೆ ಪಡೆದುಕೊಳ್ಳಿ ಎಂದು ಸಲಹೆ ನೀಡಿದ್ದಾರೆ.
ಇತ್ತೀಚಿಗೆ ಯುವರತ್ನ ಚಿತ್ರದ ಬಗ್ಗೆ ಫೇಸ್ ಬುಕ್ ನಲ್ಲಿ ಮಾತನಾಡುತ್ತಿದ್ದ ವೇಳೆ ಕೋವಿಡ್ ಜಾಗೃತಿ ಬಗ್ಗೆ ಪುನೀತ್ ಹೇಳಿದ್ದರು. ಎಲ್ಲರೂ ಫೇಸ್ ಮಾಸ್ಕ್ ಧರಿಸುವಂತೆ ವಿನಂತಿಸಿಕೊಂಡಿದ್ದರು. ತಾನೂ ಕೂಡ ಕೋವಿಡ್ ಲಸಿಕೆ ಪಡೆಯುವುದಾಗಿ ಹೇಳಿಕೊಂಡಿದ್ದರು. ಅದರಂತೆ ಇಂದು ಮೊದಲ ಡೋಸ್ ವ್ಯಾಕ್ಸಿನ್ ಪಡೆದುಕೊಂಡಿದ್ದಾರೆ.
NEWS DESK
TIMES OF BENGALURU