ನೇತ್ರದಾನ ಮಾಡಲು ಮುಂದಾದ ಡಾ.ಕೆ.ಸುಧಾಕರ್

ಬೆಂಗಳೂರು: ಇಂದುವಿಶ್ವ ಆರೋಗ್ಯ ದಿನದಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ನೇತ್ರದಾನಕ್ಕೆ ಹೆಸರು ನೋಂದಾಯಿಸಿಕೊಂಡು ನೇತ್ರದಾನದ ಮಹತ್ವ ಸಾರಿದರು. ವಿಶ್ವ ಆರೋಗ್ಯ ದಿನದ ಪ್ರಯುಕ್ತ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಮಯದಲ್ಲಿ ಡಾ.ಕೆ.ಸುಧಾಕರ್ ಮಿಂಟೋ ಆಸ್ಪತ್ರೆಗೆ ನೇತ್ರದಾನಕ್ಕೆ ಹೆಸರು ನೋಂದಾಯಿಸಿಕೊಂಡರು. ಮಿಂಟೋ ನಿರ್ದೇಶಕಿ ಡಾ.ಸುಜಾತಾ ರಾಥೋಡ್ ಅವರು, ಸಚಿವರಿಗೆ ಹೆಸರು ನೋಂದಾಯಿಸಿಕೊಂಡ ಪ್ರಮಾಣ ಪತ್ರವನ್ನು ಹಸ್ತಾಂತರಿಸಿದರು.

ಈ ಬಗ್ಗೆ ಮಾತನಾಡಿದ ಡಾ.ಕೆ.ಸುಧಾಕರ್, ಪ್ರತಿಯೊಬ್ಬರೂ ನೇತ್ರದಾನ ಮಾಡುವ ಸಂಕಲ್ಪ ಮಾಡಬೇಕೆಂದು ಮನವಿ ಮಾಡುತ್ತೇನೆ. ಪ್ರತಿ ಜೀವಿಗೂ ದೃಷ್ಟಿ ಅತ್ಯಮೂಲ್ಯವಾಗಿದೆ. ನಾವು ಮಾಡುವ ನೇತ್ರದಾನವು ಇನ್ನೊಬ್ಬರಿಗೆ ವರವಾಗಿ ಪರಿಣಮಿಸುತ್ತದೆ. ಆದ್ದರಿಂದ ನಾವೆಲ್ಲರೂ ತಪ್ಪದೇ ನೇತ್ರದಾನಕ್ಕೆ ಹೆಸರು ನೋಂದಾಯಿಸಿಕೊಂಡು ಇನ್ನೊಬ್ಬರ ಬಾಳಿನಲ್ಲಿ ಬೆಳಕು ಮೂಡಿಸುವ ಕೆಲಸ ಮಾಡೋಣ. ಈ ಮೂಲಕ ನಮ್ಮ ಜೀವನವನ್ನು ಸಾರ್ಥಕಗೊಳಿಸಿಕೊಳ್ಳೋಣ ಎಂದು ಸಚಿವರು ಸಾರ್ವಜನಿಕರಿಗೆ ಮನವಿ ಮಾಡಿದರು.

NEWS DESK

TIMES OF BENGALURU