ಮುಷ್ಕರದಿಂದ ಸಾರಿಗೆ ಇಲಾಖೆಗೆ ಭಾರಿ ನಷ್ಟ

ಬೆಂಗಳೂರು : ಆರನೇ ವೇತತನಾ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಇಂದು ಸಾರಿಗೆ ನೌಕರರ ಮುಷ್ಕರ 2 ನೇ ದಿನಕ್ಕೆ ಕಾಲಿಟ್ಟಿದೆ. ಸಾರಿಗೆ ನೌಕರರ ಮುಷ್ಕರದಿಂದ ಸರ್ಕಾರ ಖಾಸಗಿ ಬಸ್ ಗಳ ಮೊರೆ ಹೋಗಿದೆ. ನಿನ್ನೆ ಒಂದೇ ದಿನ ರಾಜ್ಯದಲ್ಲಿ 8 ಸಾವಿರಕ್ಕಿಂತ ಹೆಚ್ಚು ಖಾಸಗಿ ಬಸ್ ಗಳು ಓಡಾಡಿವೆ. ನೌಕರರ ಮುಷ್ಕರದಿಂದ ಸಾರಿಗೆ ಇಲಾಖೆಗೆ ಬರೋಬ್ಬರಿ 17 ಕೋಟಿ ರೂ. ನಷ್ಟವಾಗಿದೆ ಎನ್ನಲಾಗಿದೆ.

NEWS DESK

TIMES OF BENGALURU