ಗ್ರಾಮ ವಾಸ್ತವ್ಯಕ್ಕೆ ಬ್ರೇಕ್ !

ಬೆಂಗಳೂರು : ಬಡ ಜನರ ಮನೆ ಬಾಗಿಲಿಗೆ ಆಡಳಿತ ಎಂಬ ಉದ್ದೇಶದೊಂದಿಗೆ ಕಂದಾಯ ಸಚಿವ ಆರ್. ಅಶೋಕ್ ಜಾರಿಗೆ ತಂದಿದ್ದ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯಕ್ಕೂ ಗಂಡಾಂತರ ಎದುರಾಗಿದೆ. ಗ್ರಾಮಗಳಿಗೆ ಜಿಲ್ಲಾಧಿಕಾರಿಗಳು ಮತ್ತು ಕಂದಾಯ ಅಧಿಕಾರಿಗಳು ಭೇಟಿ ನೀಡಿ ಒಂದು ರಾತ್ರಿ ವಾಸ್ತವ್ಯ ಹೂಡುವುದು. ಸ್ಥಳೀಯ ಜನರ ಅಹವಾಲು ಸ್ವೀಕರಿಸಿ ಸ್ಥಳದಲ್ಲಿಯೇ ಪರಿಹಾರ ಮಾಡುವ ಮಹತ್ವಾಕಾಂಕ್ಷಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ರಾಜ್ಯದಲ್ಲಿ ಯಶಸ್ವಿಯಾಗಿತ್ತು.

ಪ್ರತಿ ಮಾಹೆಯ ಮೂರನೇ ಶನಿವಾರ ಹಳ್ಳಿಗಳಲ್ಲಿ ವಾಸ್ತವ್ಯ ಹೂಡುತ್ತಿದ್ದ ಅಧಿಕಾರಿಗಳು ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುತ್ತಿದ್ದರು. ಕಳೆದ ಫೆಬ್ರವರಿ ಹಾಗೂ ಮಾರ್ಚ್ ಮಾಹೆಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಹೆಸರಿನ ಗ್ರಾಮ ವಾಸ್ತವ್ಯ ರಾಜ್ಯದೆಲ್ಲೆಡೆ ಗಮನ ಸೆಳೆದಿತ್ತು. ಆದರೆ ಕೋವಿಡ್ ಎರಡನೇ ಅಲೆ ಭೀತಿಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

NEWS DESK

TIMES OF BENGALURU