ಎಸ್ಮಾ ಬ್ರಹ್ಮಾಸ್ತ್ರ ಬಳಸಲು ಸರ್ಕಾರದಿಂದ ಚಿಂತನೆ..!?

ಬೆಂಗಳೂರು: ಆರನೇ ವೇತನ ಆಯೋಗ ಹಾಗೂ ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕೆಂದು ಸಾರಿಗೆ ನೌಕರರು ನಡೆಸುತ್ತಿರುವ ಪ್ರತಿಭಟನೆಗೆ ಜಗ್ಗದ ರಾಜ್ಯ ಸರ್ಕಾರ ಇಂದು ಸಂಜೆ ಬ್ರಹ್ಮಾಸ್ತ್ರ ಬಳಸಲು ಮುಂದಾಗಿದೆ. ಬೆಳಗಾವಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಧ್ಯಾಹ್ನ ಬೆಂಗಳೂರಿಗೆ ಆಗಮಿಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಬಳಿಕ ಸಾರಿಗೆ ಇಲಾಖೆ ಅಧಿಕಾರಿಗಳ ಜತೆ ಸಿಎಂ ಸಭೆ ನಡೆಸಲಿದ್ದಾರೆ. ಕಳೆದ ಎರಡು ದಿನಗಳಿಂದ ಸರ್ಕಾರದ ಮನವಿಗೂ ಸ್ಪಂದಿಸದೆ, ಸಾರ್ವಜನಿಕರಿಗೆ ತೊಂದರೆ ಕೊಟ್ಟು ಮುಷ್ಕರ ನಡೆಸುತ್ತಿರುವ ನೌಕರರ ಮೇಲೆ ಅಗತ್ಯ ಸೇವಾ ನಿರ್ವಹಣಾ ಕಾಯ್ದೆ (ಎಸ್ಮಾ), ವಿಪತ್ತು ನಿರ್ವಹಣಾ ಕಾಯ್ದೆ ಸೇರಿದಂತೆ ಹಲವು ರೀತಿಯ ಕಾನೂನು ಕ್ರಮಗಳನ್ನು ಜರುಗಿಸಲು ಸರ್ಕಾರ ಮುಂದಾಗಿದೆ.

NEWS DESK

TIMES OF BENGALURU