60 ಪೊಲೀಸ್‌ ಸಿಬ್ಬಂದಿಗೆ ಕೊರೊನಾ ಸೋಂಕು

ಬೆಂಗಳೂರು, ಏಪ್ರಿಲ್ 8: ಬೆಂಗಳೂರಿನ ಚಂದ್ರಾಲೇಔಟ್ ಪೊಲೀಸ್ ಠಾಣೆಯ 60 ಮಂದಿ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದಾಗಿ ಪಶ್ಚಿಮ ಡಿಸಿಪಿ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಕರ್ನಾಟಕದಲ್ಲಿ ಒಂದೇ ದಿನ 6976 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ 4991 ಮಂದಿಗೆ ಸೋಂಕು ತಗುಲಿದೆ. ಕೊರೊನಾ ಎರಡನೇ ಅಲೆಯಲ್ಲಿ ಮೊದಲ ಅಲೆಗಿಂತಲೂ ವೇಗವಾಗಿ ಸೋಂಕು ತಗುಲುತ್ತಿದೆ. ರಾಜ್ಯದಲ್ಲಿ ಒಂದೇ ದಿನ 6976 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

NEWS DESK

TIMES OF BENGALURU