ಆರ್.ಸಿ.ಬಿ. ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿ

ನಾಳೆ ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ಐಪಿಎಲ್ ನ ಮೊದಲನೇ ಪಂದ್ಯ ನಡೆಯುತ್ತಿದ್ದು, ಐಪಿಎಲ್ ಪ್ರಿಯರು ಕಾತುರದಿಂದ ಕಾಯುತ್ತಿದ್ದಾರೆ. ಮೊದಲನೇ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಲಿವೆ.ಮುಂಬೈ ಇಂಡಿಯನ್ಸ್ ತಂಡ ಈಗಾಗಲೇ 5 ಬಾರಿ ಟ್ರೋಫಿ ಎತ್ತಿ ಹಿಡಿಯುವ ಮೂಲಕ ಬಲಿಷ್ಠ ತಂಡವೆನಿಸಿಕೊಂಡಿದೆ.

ಐಪಿಎಲ್ ನಲ್ಲಿ ಅತಿ ಹೆಚ್ಚು ಬಾರಿ ಕಪ್ ಗೆದ್ದಿರುವ ತಂಡ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. ವಿರಾಟ್ ಕೊಹ್ಲಿ ನಾಯಕತ್ವದ ಆರ್.ಸಿ.ಬಿ. ತಂಡ ಇದುವರೆಗೂ ಐಪಿಎಲ್ ಟ್ರೋಫಿ ಗೆಲ್ಲುವಲ್ಲಿ ವಿಫಲವಾಗಿದೆ. ಈ ಮೂಲಕ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸುತ್ತಲೇ ಇದೆ. ಗ್ಲೆನ್ ಮ್ಯಾಕ್ಸ್ ವೆಲ್ ಆರ್.ಸಿ.ಬಿ. ತಂಡಕ್ಕೆ ಸೇರ್ಪಡೆಯಾಗಿರುವುದರಿಂದ ಬ್ಯಾಟಿಂಗ್ ನಲ್ಲಿ ಬಲಿಷ್ಠವಾಗಿದೆ. ಈ ಬಾರಿಯಾದರೂ ಐಪಿಎಲ್ ಕಪ್ ಗೆಲ್ಲುತ್ತಾ ಕಾದು ನೋಡಬೇಕಾಗಿದೆ.

 

NEWS DESK

TIMES OFBENGALURU