ಕೊರೊನಾ ಬಗ್ಗೆ ಪ್ರತಿಯೊಬ್ಬರೂ ಜಾಗರೂಕರಾಗಿರಿ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿದ್ದು, ಬೆಂಗಳೂರಿನಿಂದ ಗ್ರಾಮೀಣಾ ಪ್ರದೇಶಗಳಿಗೆ ಹೋಗುವವರು ಎಚ್ಚರಿಕೆಯಿಂದ ಇರಬೇಕು. ಹಳ್ಳಿಗಳಲ್ಲಿ ಕೊರೊನಾ ಸೋಂಕು ಹರಡದಂತೆ ನೋಡಿಕೊಳ್ಳಬೇಕು ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುಗಾದಿ ಹಬ್ಬ ಬರುತ್ತಿದೆ ಎಂದು ಕೊರೊನಾ ಸುಮ್ಮನಾಗಲ್ಲ. ಬೆಂಗಳೂರಿನಿಂದ ಗ್ರಾಮೀಣ ಭಾಗಕ್ಕೆ ಹೋಗುವವರು ಎಚ್ಚರಿಕೆಯಿಂದ ಇರಬೇಕು. ರಾಜ್ಯದಲ್ಲಿ ಪ್ರತಿದಿನ 5 ಸಾವಿರಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ದಾಖಲಾಗುತ್ತಿದ್ದು, ಪ್ರತಿಯೊಬ್ಬರೂ ಜಾಗರೂಕರಾಗಿರಿ ಎಂದರು.

NEWS DESK

TIMES OF BENGALURU