ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಪಾರ್ಟ್ಮೆಂಟ್ಗಳಲ್ಲಿ ಕೋವಿಡ್ ಲಸಿಕೆ ನೀಡಲು ಯೋಜನೆ ರೂಪಿಸಲಾಗಿದೆ. 3,300 ಅಪಾರ್ಟ್ಮೆಂಟ್ಗಳನ್ನು ಗುರುತಿಸಲಾಗಿದೆ. ಬಿಬಿಎಂಪಿಯ ಆರೋಗ್ಯ ವಿಭಾಗದ ವಿಶೇಷ ಆಯುಕ್ತರು ಈ ಕುರಿತು ಮಾಹಿತಿ ನೀಡಿದ್ದಾರೆ. 550ಕ್ಕಿಂತ ಹೆಚ್ಚು ಜನರು ಇರುವ ಅಪಾರ್ಟ್ಮೆಂಟ್ಗಳನ್ನು ವಾರ್ಡ್ ವಾರು ಗುರುತಿಸಲಾಗಿದೆ ಎಂದರು. ಖಾಸಗಿ ಆಸ್ಪತ್ರೆಗಳಿಗೆ ಅಪಾರ್ಟ್ಮೆಂಟ್ಗಳಲ್ಲಿ ಕೋವಿಡ್ ಲಸಿಕೆ ಹಾಕುವ ವ್ಯವಸ್ಥೆ ಮಾಡಿಕೊಳ್ಳುವಂತೆ ಬಿಬಿಎಂಪಿ ಸೂಚನೆ ನೀಡಲಿದೆ. 3,300 ಅಪಾರ್ಟ್ಮೆಂಟ್ಗಳನ್ನು ಇದುವರೆಗೂ ಗುರುತಿಸಲಾಗಿದೆ ಎಂದು ಹೇಳಿದರು.
NEWS DESK
TIMES OF BENGALURU