ಸಬ್ ರಿಜಿಸ್ಟ್ರಾರ್ ಕಚೇರಿ ಸಮಯದಲ್ಲಿ ಬದಲಾವಣೆ

ಬೆಂಗಳೂರು: ನೋಂದಣಿ ಮತ್ತು ಮುದ್ರಾಂಕ ಇಲಾಖೆ ಸಬ್ ರಿಜಿಸ್ಟ್ರಾರ್ ಕಚೇರಿ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ದಸ್ತಾವೇಜುಗಳನ್ನು ನೋಂದಾಯಿಸುವ ಸಮಯದಲ್ಲಿ ಬದಲಾವಣೆಯಾಗಿದೆ.

ಏಪ್ರಿಲ್ 15 ರಿಂದ ಪ್ರತಿದಿನ ಬೆಳಗ್ಗೆ 9.30 ರಿಂದ ಸಂಜೆ 6.30 ಕ್ಕೆ ಸಮಯ ನಿಗದಿಪಡಿಸಲಾಗಿದೆ. 9 ಗಂಟೆಯಿಂದ ಸಂಜೆ 6.30 ರವರೆಗೆ ಸಮಯ ವಿಸ್ತರಿಸಲಾಗಿತ್ತು. ಆದರೆ, ಅತಿಯಾದ ಕೆಲಸ ಒತ್ತಡದಿಂದ ನೌಕರರಿಗೆ ಸಮಸ್ಯೆಗಳು ಉಂಟಾದ ಕಾರಣದಿಂದ ಇಲಾಖೆಗೆ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ದಸ್ತಾವೇಜುಗಳ ನೋಂದಣಿ ಸಮಯವನ್ನು ಬೆಳಗ್ಗೆ 9.30 ರಿಂದ 6.30 ರವರೆಗೆ ನಿಗದಿಪಡಿಸಲಾಗಿದೆ ಎಂದು ಹೇಳಲಾಗಿದೆ.

NEWS DESK

TIMES OF BENGALURU