ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಗೆ ನಿಗದಿಪಡಿಸಿದ್ದ ಪಠ್ಯಕ್ರಮದ ಪಾಠ ಪ್ರವಚನಗಳು ಮುಗಿದು ಪುನರಾವರ್ತನೆಯ ಹಂತದಲ್ಲಿರುವ ಈ ಸಮಯದಲ್ಲಿ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಪ್ರೇರೇಪಣೆಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಗುರುವಾರ ಬೆಂಗಳೂರಿನಲ್ಲಿ ಬೆಂಗಳೂರು ಉತ್ತರ, ದಕ್ಷಿಣ ಮತ್ತು ಗ್ರಾಮಾಂತರ ಜಿಲ್ಲೆಗಳ ಡಿಡಿಪಿಐ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳೊಂದಿಗೆ ಎಸ್ ಎಸ್ ಎಲ್ ಸಿ ಪಾಠ ಪ್ರವಚನಗಳ ಪ್ರಗತಿ ಮತ್ತು ಪರೀಕ್ಷಾ ಸಿದ್ಧತೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷೆಗೆ ನೊಂದಣಿ ಮಾಡಿಸಿರುವ ಯಾವುದೇ ವಿದ್ಯಾರ್ಥಿಯೂ ಗೈರು ಹಾಜರಾಗದಂತೆ ಕ್ರಮ ವಹಿಸಬೇಕೆಂದು ಸಲಹೆ ನೀಡಿದ್ದಾರೆ.
NEWS DESK
TIMES OF BENGALURU