ಮಾಸ್ಕ್ ದಂಡ ಪ್ರಮಾಣದಲ್ಲಿ ಹೆಚ್ಚಳ..!

ಬೆಂಗಳೂರು : ಕೆಲವರು ಉದ್ದೇಶಪೂರ್ವಕವಾಗಿ ಮಾಸ್ಕ್ ಧರಿಸದೆ ನಿಯಮ ಉಲ್ಲಂಘನೆ ಮಾಡುತ್ತಿರುವ ಕಾರಣ ದಂಡದ ಪ್ರಮಾಣವನ್ನು ಹೆಚ್ಚಳ ಮಾಡಲು ಸರ್ಕಾರ ಆಲೋಚಿಸಿದೆ. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿಯೊಬ್ಬರೂ ಮಾಸ್ಕ್ ಧರಿಸದಿದ್ದರೆ ಈಗಿರುವ ದಂಡದ ಪ್ರಮಾಣವನ್ನು ಪರಿಷ್ಕರಿಸುವ ಬಗ್ಗೆ ನಿನ್ನೆ ನಡೆದ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ತಿಳಿದುಬಂದಿದೆ.

ಇತ್ತಿಚೆಗೆ ನಗರಪ್ರದೇಶದಲ್ಲಿ ಯಾವುದೇ ವ್ಯಕ್ತಿ ಮಾಸ್ಕ್ ಧರಿಸದಿದ್ದರೆ 250 ರೂ. ಹಾಗೂ ಗ್ರಾಮೀಣ ಭಾಗಗಳಲ್ಲಿ 100 ರೂ. ದಂಡವನ್ನು ಹಾಕಲಾಗುತ್ತಿತ್ತು. ಆದರೆ ಸಾರ್ವಜನಿಕರು ಇದರ ಬಗ್ಗೆ ಡೊಂಟ್ ಕೇರ್ ಅಂತಾ ಓಡಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇನ್ಮುಂದೆ ಬೆಂಗಳೂರು ಸೇರಿದಂತೆ ನಗರ ಭಾಗಗಳಲ್ಲಿ ಮಾಸ್ಕ್ ಹಾಕದಿದ್ದರೆ 350 ರೂ. ಹಾಗೂ ಗ್ರಾಮೀಣ ಭಾಗಗಳಲ್ಲಿ 200 ರೂ. ದಂಡ ಹಾಕಬೇಕೆಂಬ ಅಭಿಪ್ರಾಯ ವ್ಯಕ್ತವಾಗಿದೆ.

NEWS DESK

TIMES OF BENGALURU