ರೌಡಿಶೀಟರ್‌ನನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು

ಬೆಂಗಳೂರು: ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಕೆ.ಜಿ.ಹಳ್ಳಿ ಪೊಲೀಸ್ ಠಾಣೆಯ ರೌಡಿಶೀಟರ್‍ನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಸುಹೈಲ್ ಅಲಿಯಾಸ್ ಲಂಗ್ಡಾ ಕೊಲೆಯಾದ ರೌಡಿಶೀಟರ್ ತನ್ವೀರ್‍ನೊಂದಿಗೆ ಸುಹೈಲ್ ಗುರುತಿಸಿಕೊಂಡಿದ್ದ. ಇತ್ತೀಚಿಗೆ ವಿರೋಧಿ ಗುಂಪಿನೊಂದಿಗೆ ಗಲಾಟೆ ಮಾಡಿಕೊಂಡಿದ್ದ. ಇದರಿಂದ ಆಕ್ರೋಶಗೊಂಡಿದ್ದ ದುಷ್ಕರ್ಮಿಗಳು ಈತನನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರು.

ಬುಧವಾರ ಡಿ.ಜೆ.ಹಳ್ಳಿಯ ಮೋದಿ ರಸ್ತೆಯಲ್ಲಿ ಸುಹೈಲ್ ಒಂಟಿಯಾಗಿ ಹೋಗುತ್ತಿದ್ದ ವೇಳೆ ಅಡ್ಡಗಟ್ಟಿದ ದುಷ್ಕರ್ಮಿಗಳು ಬಲವಾದ ಮಾರಕಾಸ್ತ್ರದಿಂದ ಹಲ್ಲೆನಡೆಸಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಹಳೇ ದ್ವೇಷಕ್ಕೆ ಕೊಲೆ ಮಾಡಿರುವ ಸಾಧ್ಯತೆಗಳಿವೆ ಎಂದು ಪೆÇಲೀಸ್ ಮೂಲಗಳು ತಿಳಿಸಿವೆ.
ಹತ್ಯೆಯ ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುವುದಾಗಿ ಪೆÇಲೀಸರು ತಿಳಿಸಿದ್ದಾರೆ.

NEWS DESK

TIMES OF BENGALURU