ಆಸ್ಪತ್ರೆಗಳಲ್ಲಿ ಹಾಸಿಗೆ ಹೆಚ್ಚಿಸುವುದು ಅತ್ಯಗತ್ಯ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೆಂಟ್ರಲ್ ಹಾಸ್ಪಿಟಲ್ ಬೆಡ್ ಅಲೋಕೇಷನ್ ಟೀಮ್ ಜೊತೆ ಶುಕ್ರವಾರ ಸಭೆ ನಡೆಸಲಾಗಿದ್ದು, ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜುಗಳಲ್ಲಿ ಯಾವ ರೀತಿ ಹಾಸಿಗೆಗಳನ್ನು ವ್ಯವಸ್ಥೆ ಮಾಡಿಕೊಳ್ಳಬೇಕು, ಯಾರಿಗೆ ಯಾವ ಜವಾಬ್ದಾರಿ ನೀಡಬೇಕು ಎಂಬುದರ ಬಗ್ಗೆ ಚರ್ಚಿಸಲಾಗಿದೆ ಎಂದು ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕಿತರಿಗೆ ಹಾಸಿಗೆ ಲಭ್ಯತೆ, ಸಹಾಯವಾಣಿ ಸಂಖ್ಯೆ ಹಾಗೂ ಇನ್ನಿತರೆ ವಿಷಯಗಳ ಕುರಿತು ಸರ್ಕಾರದ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ರವರ ನೇತೃತ್ವದಲ್ಲಿ ನಡೆದ ವರ್ಚುವಲ್ ಸಭೆ ಬಳಿಕ ಸುದ್ದಿಗಾರರೊಂದಿಗೆ ಮುಖ್ಯ ಆಯುಕ್ತರು ಮಾತನಾಡಿ, ನಗರದಲ್ಲಿ ಹಾಸಿಗೆ ಸಂಖ್ಯೆ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಈಗಾಗಲೇ ಐಎಎಸ್ ಹಾಗೂ ಐಪಿಎಸ್ ತಂಡಗಳನ್ನು ರಚನೆ ಮಾಡಲಾಗಿದ್ದು, ಆ ತಂಡಗಳ ಜೊತೆ ಇಂದು ಸಭೆ ನಡೆಸಿ ಮೂಂದಿನ 10 ದಿನಗಳಲ್ಲಿ ಕನಿಷ್ಟ 6,000 ಹಾಸಿಗೆಗಳನ್ನು ಕೋವಿಡ್ ಸೋಂಕಿತರಿಗಾಗಿ ಮೀಸಲಿಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

NEWS DESK

TIMES OF BENGALURU