ಬೆಂಗಳೂರು : ರಾಜ್ಯದ ಆಯ್ದ ನಗರಗಳಲ್ಲಿ ರಾತ್ರಿ ಕರ್ಪ್ಯೂ ಹೇರಿರುವ ರಾಜ್ಯ ಸರ್ಕಾರದ ಕ್ರಮ ಕೊರೊನಾ ಓಡಿಸಲು ತಟ್ಟೆ ಬಡಿಯುವ ಕ್ರಮದಷ್ಟೇ ಬಾಲಿಷವಾದುದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ರಾಜ್ಯದ ಆಯ್ದ ನಗರಗಳಲ್ಲಿ ರಾತ್ರಿ ಕರ್ಪ್ಯೂ ಹೇರಿರುವ ರಾಜ್ಯ ಸರ್ಕಾರದ ಕ್ರಮ ಕೊರೊನಾ ಓಡಿಸಲು ತಟ್ಟೆ ಬಡಿಯುವ ಕ್ರಮದಷ್ಟೇ ಬಾಲಿಷವಾದುದು. ಅಲ್ಲೊಬ್ಬರು ಪಾಳೆಯಗಾರ, ಇಲ್ಲೊಬ್ಬರು ಮಾಂಡಲಿಕ ಭಲೇ ಜೋಡಿ ಎಂದು ವ್ಯಂಗ್ಯವಾಡಿದ್ದಾರೆ.
NEWS DESK
TIMES OF BENGALURU