ಬೆಂಗಳೂರು : ಕರ್ನಾಟಕ ಸರ್ಕಾರ ಕೋವಿಡ್ ಸೋಂಕು ಹರಡುವಿಕೆ ತಡೆಯಲು ಕೊರೊನಾ ಕರ್ಪ್ಯೂ ಘೋಷಣೆ ಮಾಡಿದೆ. ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್ 10ರಿಂದ 20ರ ತನಕ ಕರ್ಪ್ಯೂ ಜಾರಿಯಲ್ಲಿರುತ್ತದೆ. ಇನ್ನು ಶುಕ್ರವಾರ ರಾತ್ರಿ ಕರ್ಪ್ಯೂ ಮಾರ್ಗಸೂಚಿಯನ್ನು ಸರ್ಕಾರ ಬಿಡುಗಡೆ ಮಾಡಿದೆ. ಕೊರೊನಾ ಕರ್ಫ್ಯೂ 10 ದಿನಗಳ ಅವಧಿಗೆ ಮಾತ್ರ ಸೀಮಿತವಾಗಿದೆ. ರಾತ್ರಿ ವೇಳೆ ಮಾತ್ರ ಸಂಚಾರಕ್ಕೆ ಅವಕಾಶವಿಲ್ಲ.
ಆದ್ದರಿಂದ, ತಡರಾತ್ರಿಯ ಸಂಚಾರಕ್ಕೆ ಯಾವುದೇ ಪಾಸು ನೀಡುವುದಿಲ್ಲ ಎಂದು ಪೊಲೀಸ್ ಇಲಾಖೆ ಹೇಳಿದೆ. ಸರ್ಕಾರದ ಮಾರ್ಗಸೂಚಿ ಪ್ರಕಾರ ಕರ್ಫ್ಯೂ ಅವಧಿಯಲ್ಲಿ ಅತ್ಯವಶ್ಯಕ ಸೇವೆ ಒದಗಿಸುವಂತಹ ವಾಹನಗಳು/ ಸರಕು ಸಾಗಾಣಿಕೆ ವಾಹನಗಳು/ ಹೋಂ ಡೆಲಿವರಿ/ ಇ-ಕಾಮರ್ಸ್ ಮತ್ತು ಖಾಲಿ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ.
NEWS DESK
TIMES OF BENGALURU