ಮೆಟ್ರೊ ನಿಲ್ದಾಣದಲ್ಲಿ ಮೃತದೇಹ ಪತ್ತೆ

ಬೆಂಗಳೂರು: ಯಲಚೇನಹಳ್ಳಿ ಮೆಟ್ರೊ ನಿಲ್ದಾಣದಲ್ಲಿ ನಾಗರಾಜ್ (52) ಎಂಬುವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದೆ. ಸುಬ್ರಹ್ಮಣ್ಯಪುರ ನಿವಾಸಿ ನಾಗರಾಜ್, ರಿಯಲ್ ಎಸ್ಟೇಟ್ ಏಜೆಂಟ್ ಆಗಿದ್ದರು. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ ಎಂದು ಪೆÇಲೀಸರು ಹೇಳಿದರು. ನಿಲ್ದಾಣದಲ್ಲಿರುವ ಸಿ.ಸಿ.ಟಿ.ವಿ ಕ್ಯಾಮೆರಾ ಡಿವಿಆರ್ ವಶಕ್ಕೆ ಪಡೆದು ಪರಶೀಲನೆ ನಡೆಸಲಾಗುತ್ತಿದೆ. ನಾಗರಾಜ್ ಅವರು ನಿಲ್ದಾಣಕ್ಕೆ ಬಂದಿದ್ದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಿಬ್ಬಂದಿಯಿಂದಲೂ ಹೇಳಿಕೆ ಪಡೆಯಲಾಗಿದೆ ಎಂದು ತಿಳಿಸಿದರು.

NEWS DESK

TIMES OF BENGALURU