ಬೆಂಗಳೂರು: ಸಾರಿಗೆ ನೌಕರರ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿರುವ ನಟ ಚೇತನ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಸಾರಿಗೆ ನೌಕರರ ಬೇಡಿಕೆ ಇಂದು ನಿನ್ನೆಯದಲ್ಲ. 16 ವರ್ಷಗಳಿಂದ ಬೇಡಿಕೆಯಿಟ್ಟು ಹೋರಾಟ ನಡೆಸುತ್ತಿದ್ದಾರೆ. ನೌಕರರ 8 ಬೇಡಿಕೆ ಈಡೇರಿಸಿದ್ದೇವೆ ಎಂಬ ಸರ್ಕಾರದ ಹೇಳಿಕೆ ಸುಳ್ಳು ಎಂದು ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚೇತನ್, ಸರ್ಕಾರ ಸಾರಿಗೆ ಸಿಬ್ಬಂದಿ ಮೇಲೆ ದಬ್ಬಾಳಿಕೆ ನಡೆಸುತ್ತಿದೆ. ಕರ್ತವ್ಯಕ್ಕೆ ಹಾಜರಾಗದ ನೌಕರರನ್ನು ವಜಾ ಮಾಡಲಾಗುತ್ತಿದೆ. ಮನೆಯಿಂದ ಹೊರ ಹಾಕುವ ಬೆದರಿಕೆ ಹಾಕಲಾಗುತ್ತಿದೆ. ಅನ್ಯಾಯದ ವಿರುದ್ಧ ಹೋರಾಟ ನಡೆಸಿದವರ ವಿರುದ್ಧ ಸರ್ಕಾರದ ಇಂಥಹ ದೋರಣೆ ಜನವಿರೋಧಿಯಾಗಿದೆ ಎಂದು ಕಿಡಿಕಾರಿದ್ದಾರೆ.
NEWS DESK
TIMES OF BENGALURU