ನಡು ರಸ್ತೆಯಲ್ಲೇ ರೌಡಿಯನ್ನು ಕೊಂದ ದುಷ್ಕರ್ಮಿಗಳು

ಬೆಂಗಳೂರು: ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯಲ್ಲಿ ರೌಡಿ ಸುನೀಲ್ ಅಲಿಯಾಸ್ ಕಾಡುನನ್ನು (34) ಮಾರಕಾಸ್ತ್ರಗಳಿಂದ ಕೊಚ್ಚಿ ಶನಿವಾರ ತಡರಾತ್ರಿ ಕೊಲೆ ಮಾಡಲಾಗಿದೆ. ಸ್ಥಳೀಯ ನಿವಾಸಿಯಾಗಿದ್ದ ಸುನೀಲ್, ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ. ಬ್ಯಾಟರಾಯನಪುರ ಠಾಣೆ ರೌಡಿ ಪಟ್ಟಿಯಲ್ಲಿ ಆತನ ಹೆಸರಿತ್ತು ಎಂದು ಪೊಲೀಸರು ಹೇಳಿದರು.ಠಾಣೆ ವ್ಯಾಪ್ತಿಯ ಕಸ್ತೂರಿ ನಗರದಲ್ಲಿ ಸುನೀಲ್‍ನನ್ನು ಅಡ್ಡಗಟ್ಟಿದ್ದ ದುಷ್ಕರ್ಮಿಗಳ ತಂಡ, ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದೆ. ತೀವ್ರ ರಕ್ತಸ್ರಾವದಿಂದ ಸುನೀಲ್ ರಸ್ತೆಯಲ್ಲೇ ನರಳಿ ಪ್ರಾಣ ಬಿಟ್ಟಿದ್ದಾನೆ. ಸ್ಥಳಕ್ಕೆ ಹೋಗಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

NEWS DESK

TIMES OF BENGALURU