ಜನ ಸಹಕರಿಸದಿದ್ದರೆ ಲಾಕ್ ಡೌನ್ ಅನಿವಾರ್ಯ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸ್ಪೋಟವಾಗಿದ್ದು, ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಸಿಗುತ್ತಿಲ್ಲವಾದ ಕಾರಣ ಒಟ್ಟು 8 ನಗರಗಳಲ್ಲಿ ನೈಟ್ ಕಫ್ರ್ಯೂ ಜಾರಿ ಮಾಡಲಾಗಿದೆ.

ಇಷ್ಟಾದರೂ ಸಹ ಜನತೆ ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳದಿರುವುದು ಕಂಡುಬರುತ್ತಿದೆ. ಹೀಗಾಗಿ ಸರ್ಕಾರ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಪದೇ ಪದೇ ಸಾರ್ವಜನಿಕರನ್ನು ಎಚ್ಚರಿಸುತ್ತಿದೆ. ಇದೀಗಲಾಕ್ ಡೌನ್ ಕುರಿತಂತೆ ಮುಖ್ಯಮಂತ್ರಿ ಯಡಿಯೂರಪ್ಪನವರು ಮಹತ್ವದ ಹೇಳಿಕೆ ನೀಡಿದ್ದು, ಜನ ಸಹಕರಿಸದಿದ್ದರೆ ಲಾಕ್ಡೌನ್ ಅನಿವಾರ್ಯವಾಗಬಹುದು ಎಂದಿದ್ದಾರೆ.

NEWS  DESK

TIMES OF BENGALURU