ಬೆಂಗಳೂರು : ಸದ್ಯ ಕರ್ನಾಟಕ ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇದೆ. ಈಗಾಗಲೇ ನೈಟ್ ಕರ್ಫ್ಯೂ ಜಾರಿಯಲ್ಲಿದೆ. ಇದರ ಜೊತೆಗೆ ಲಾಕ್ ಡೌನ್ ಮಾಡುವ ಬಗ್ಗೆಯೂ ಚರ್ಚೆಯಾಗುತ್ತಿದೆ. ಇನ್ನೂ ಲಾಕ್ ಡೌನ್ ಆಗುತ್ತಾ ಅಥವಾ ಇಲ್ವಾ ಎನ್ನುವ ಬಗ್ಗೆ ಜನರಲ್ಲಿ ಸಾಕಷ್ಟು ಅನುಮಾನಗಳಿವೆ. ಈ ಬಗ್ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತ ಗೌರವ್ ಗುಪ್ತಾ ಅವರು ಜನರಿಗೆ ಎಚ್ಚರಿಕೆ ನೀಡಿದ್ದಾರೆ.
ಕರ್ಫ್ಯೂ, ಲಾಕ್ ಡೌನ್ ಇದ್ಯಾವ್ದೂ ಬೇಡ ಎನ್ನುವುದಾದರೆ ಜನ ಮನೆಯಲ್ಲೇ ಇರಬೇಕು. ಸದ್ಯ ಸರ್ಕಾರದ ನಿರ್ದೇಶನಕ್ಕೆ ಪಾಲಿಕೆ ಬದ್ಧವಾಗಿದೆ. ಈಗಂತೂ ಯುಗಾದಿ ಹಬ್ಬ ಕೂಡಾ ಹತ್ತಿರ ಬರ್ತಿದೆ. ಹಬ್ಬ ಹರಿದಿನ ಅಂತ ಓಡಾಡಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ. ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಹೆಚ್ಚುವರಿ ಹಾಸಿಗೆಗಳ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಬಿಬಿಎಂಪಿ ಕಾರ್ಯಪ್ರವೃತ್ತವಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.
NEWS DESK
TIMES OF BENGALURU