ಸಾರಿಗೆ ನೌಕರರ ಕೂಟದಿಂದ ಸಿಎಂಗೆ ಪತ್ರ

ಬೆಂಗಳೂರು : ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವಂತ ಮುಷ್ಕರ 6ನೇ ದಿನಕ್ಕೆ ಕಾಲಿಟ್ಟಿದೆ. ಇಂತಹ ಸಂದರ್ಭದಲ್ಲಿ ಸಾರಿಗೆ ನೌಕರರ ಬೇಡಿಕೆ ಈಡೇರಿಕೆ ಬಗ್ಗೆ ರಾಜ್ಯ ಸರ್ಕಾರ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ನೀಡಿಲ್ಲ. ಹೀಗಾಗಿ ರಾಜ್ಯ ಸರ್ಕಾರ ನೀಡಿರುವಂತ ಭರವಸೆಗಳ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಡ ಸಿಎಂ ಯಡಿಯೂರಪ್ಪ ಅವರಿಗೆ ಪತ್ರದಲ್ಲಿ ಮನವಿ ಮಾಡಿದೆ.

ಆದ್ದರಿಂದ ಈ ಕೂಡಲೇ ಸಾರಿಗೆ ನೌಕರರಿಗೆ 6ನೇ ವೇತನ ಆಯೋಗದ ಶಿಫಾರಸ್ಸಿನಂತೆ ಯಥಾಸ್ಥಿತಿ ವೇತನ ನೀಡುವುದು ಹಾಗೂ ನೌಕರರಿಗೆ ಅನುಕೂಲವಲ್ಲದ 8 ಭರವಸೆಗಳನ್ನು ನೌಕರರಿಗೆ ಅನುಕೂಲವಾಗುವ ರೀತಿಯಲ್ಲಿ ದೋಷಗಳನ್ನು ಸರಿಪಡಿಸಿ, ಕೂಡಲೇ ಸಮಸ್ತ ಸಾರಿಗೆ ನೌಕರರು, ಅವರ ಕುಟುಂಬರಿಗೆ ಅನುಕೂಲ ಮಾಡಿಕೊಡಬೇಕು ಎಂಬುದಾಗಿ ಪತ್ರದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.

NEWS DESK

TIMES OF BENGALURU