ಕೊರೊನಾ ಹೆಚ್ಚಳ; ಸರ್ವಪಕ್ಷ ಸಭೆ ಕರೆದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಜನರು ಸಹಕರಿಸದಿದ್ದಲ್ಲಿ ಲಾಕ್ ಡೌನ್ ಅನಿವಾರ್ಯ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸರ್ವಪಕ್ಷ ಸಭೆ ಕರೆಯಲಾಗುವುದು. ಏಪ್ರಿಲ್ 18, 19ರಂದು ಸಭೆ ಕರೆದು ಚರ್ಚಿಸಿಸಲಾಗುವುದು. ವಿಪಕ್ಷ ನಾಯಕರಾದ ಸಿದ್ದರಾಮಯ್ಯ, ಹೆಚ್.ಡಿ. ಕುಮಾರಸ್ವಾಮಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಎಲ್ಲರೊಂದಿಗೂ ಚರ್ಚಿಸಿ ಕೋವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ನಿರ್ಧರಿಸಲಾಗುವುದು ಎಂದರು.

NEWS DESK

TIMES OF BENGALURU