ಹೋಟೆಲ್‍ನ 19 ಸಿಬ್ಬಂದಿಗೆ ಕೊರೊನಾ ಪಾಸಿಟಿವ್

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಬೆಂಗಳೂರಿನ ಒಂದೇ ಹೋಟೆಲ್ 19 ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

ಬೆಂಗಳೂರಿನ ಜೆ.ಪಿ. ನಗರದ ಒಂದೇ ಹೋಟೆಲ್ ನ 19 ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಸದ್ಯ ಇವರ ಸಂಪರ್ಕದಲ್ಲಿರುವವರಿಗೆ ಕೋವಿಡ್ ಟೆಸ್ಟ್ ಗೆ ಸಿದ್ಧತೆ ಮಾಡಲಾಗಿದ್ದು, ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಸದ್ಯ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

NEWS DESK

TIMES OF BENGALURU