ಯುಗಾದಿ ಹಬ್ಬಕ್ಕೆ ಶುಭಕೋರಿದ ಸಿಎಂ

ಬೆಂಗಳೂರು : ನಾಡಿನ ಸಮಸ್ತ ಜನತೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಯುಗಾದಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ನಾಡಿನ ಸಮಸ್ತ ಜನತೆಗೆ ಯುಗಾದಿಯ ಹಾರ್ದಿಕ ಶುಭಾಶಯಗಳು. ನೂತನ ಪ್ಲವ ಸಂವತ್ಸರವು ಎಲ್ಲರ ಬಾಳಿನಲ್ಲಿ ಆರೋಗ್ಯ, ಸುಖ, ಸಮೃದ್ಧಿ, ಯಶಸ್ಸನ್ನು ಹೊತ್ತು ತರಲಿ, ಸಾಂಕ್ರಾಮಿಕ ರೋಗದ ಪಿಡುಗು ನಾಡಿನಿಂದ ತೊಲಗಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ. ನಾವೂ ಸುರಕ್ಷಿತರಾಗಿದ್ದು, ಇತರರೂ ಸುರಕ್ಷಿತರಾಗಿರುವಂತೆ, ಎಲ್ಲ ಮುನ್ನೆಚ್ಚರಿಕೆ ವಹಿಸಿ ಹಬ್ಬ ಆಚರಿಸೋಣ ಎಂದು ಹೇಳಿದ್ದಾರೆ.

NEWS DESK

TIMES OF BENGALURU