ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ

ಬೆಂಗಳೂರು: ಲಾಕ್ಡೌನ್ ಕುರಿತು ಎದ್ದಿರುವ ಊಹಾಪೆÇೀಹಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದು, ಸದ್ಯಕ್ಕೆ ಲಾಕ್ಡೌನ್ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ಕರ್ನಾಟಕದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಮತ್ತೆ ಲಾಕ್ ಡೌನ್  ಮೊರೆ ಹೋಗಬಹುದು ಎಂಬ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಇಂಬು ನೀಡುವಂತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಹ ತಾಂತ್ರಿಕ ಸಲಹಾ ಸಮಿತಿ ಲಾಕ್ಡೌನ್ ಮಾಡಲು ಸೂಚಿಸಿದೆ ಎಂದು ಹೇಳಿದ್ದರು. ಆದರೆ, ಇದೆಲ್ಲವನ್ನೂ ಸ್ಪಷ್ಟವಾಗಿ ನಿರಾಕರಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯದಲ್ಲಿ ಸದ್ಯಕ್ಕೆ ಲಾಕ್ಡೌನ್ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

NEWS DESK

TIMESOF BENGALURU