ಟ್ರಾನ್ಸ್‌ಫಾರ್ಮರ್‌ಗಳನ್ನು ಸ್ಥಳಾಂತರಿಸಲು ಸಮಿತಿ ರಚನೆ

ಬೆಂಗಳೂರು: ನಗರದ ಪಾದಚಾರಿ ಮಾರ್ಗಗಳಲ್ಲಿ ಇರುವ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳನ್ನು ಸ್ಥಳಾಂತರಿಸುವ ಸಂಬಂಧ ವಿಧಾನಗಳನ್ನು ರೂಪಿಸಲು ಸಮನ್ವಯ ಸಮಿತಿ ರಚಿಸಲಾಗುವುದು ಎಂದು ಹೈಕೋರ್ಟ್‍ಗೆ ಬಿಬಿಎಂಪಿ ಮತ್ತು ಬೆಸ್ಕಾಂ ಮಾಹಿತಿ ನೀಡಿವೆ.

ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಎಂ.ಬಿ. ರಾಜೇಶಗೌಡ ಮತ್ತು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಪ್ರಮಾಣಪತ್ರ ಸಲ್ಲಿಸಿದ್ದಾರೆ. ವಿದ್ಯುತ್ ಉಪಕರಣ ಅಥವಾ ಟ್ರಾನ್ಸ್‌ಫಾರ್ಮರ್‌ಗಳನ್ನು ಅಳವಡಿಸಲು ಅನುಕೂಲಕರ ಸ್ಥಳಗಳನ್ನು ಗುರುತಿಸುವ ಉದ್ದೇಶದಿಂದ ಸಮಿತಿ ರಚಿಸಲಾಗುತ್ತಿದೆ ಎಂದು ಪ್ರಮಾಣಪತ್ರದಲ್ಲಿ ತಿಳಿಸಿದ್ದಾರೆ. ಜನ ಸಂಚಾರಕ್ಕೆ ಅಡ್ಡಿಯಾಗುತ್ತಿರುವ ಸುಮಾರು 800 ಟ್ರಾನ್ಸ್‌ಫಾರ್ಮರ್‌ಗಳನ್ನು ಬದಲಿಸುವ ಕೆಲಸ ನಡೆಯುತ್ತಿದೆ ಎಂದು ಬೆಸ್ಕಾಂ ತಿಳಿಸಿದೆ. ಆಗುತ್ತಿರುವ ಅನಾನುಕೂಲ ತಪ್ಪಿಸಲು ಸಮಾಲೋಚನೆ ಪ್ರಕ್ರಿಯೆ ಕೂಡಲೇ ಆರಂಭಿಸಲಾಗುವುದು ಎಂದು ಬಿಬಿಎಂಪಿ ಭರವಸೆ ನೀಡಿದೆ.

NEWS DESK

TIMES OF BENGALURU