ಕೊರೊನಾ ದಂಡ; ಭಾರೀ ಮೊತ್ತ ಸಂಗ್ರಹ

ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿದ್ದು, ಸೋಂಕು ಹರಡುವುದನ್ನು ತಡೆಯಲು ಸರ್ಕಾರ ವಿವಿಧ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಇವುಗಳಿಂದ ಸೋಂಕು ಹರಡುವುದನ್ನು ತಡೆಯಬಹುದು ಹೀಗಾಗಿ ಕೊರೊನಾ ನಿಯಮ ಪಾಲಿಸದೇ ಇರುವವರಿಗೆ ದಂಡ ಹಾಕಲು ಸರ್ಕಾರ ನಿರ್ಧರಿಸಿದ್ದು, ನಗರದಲ್ಲಿ ಪೊಲೀಸರು ಕಳೆದ 11ದಿನಗಳಿಂದ ಬರೋಬ್ಬರಿ 83 ಲಕ್ಷದ 49 ಸಾವಿರದ 740ರೂಪಾಯಿ ದಂಡ ಸಂಗ್ರಹಿಸಿದ್ದಾರೆ.

NEWS DESK

TIMES OF BENGALURU