ಮುಷ್ಕರ ನಿರತ ಸಿಬ್ಬಂದಿಗಳಿಗೆ ಸಿಎಂ ವಾರ್ನಿಂಗ್

ಬೆಂಗಳೂರು: 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಇಂದು 7ನೇ ದಿನಕ್ಕೆ ಕಾಲಿಟ್ಟಿದ್ದು, ಸಾರಿಗೆ ಸಿಬ್ಬಂದಿಗಳು ಹಾಗೂ ಸರ್ಕಾರದ ನಡುವಿನ ಶೀತಲ ಸಮರ ತಾರಕಕ್ಕೇರಿದೆ. ಮುಷ್ಕರ ನಿರತ ಸಿಬ್ಬಂದಿಗಳ ವಿರುದ್ಧ ಸಿಎಂ ಯಡಿಯೂರಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಸಾರಿಗೆ ನೌಕರರೊಂದಿಗೆ ಮಾತುಕತೆಯ ಪ್ರಶ್ನೆಯೇ ಇಲ್ಲ, ಮುಷ್ಕರ ನಿರತ ಸಿಬ್ಬಂದಿಗಳ ಸಂಬಳ ನೀಡಲೂ ಸಾಧ್ಯವಿಲ್ಲ. ಒಂದು ತಿಂಗಳ ಕಾಲ ಪ್ರತಿಭಟನೆ ನಡೆಸಿದರೂ ಸರಿ 6ನೇ ವೇತನ ಆಯೋಗ ಜಾರಿ ಅಸಾಧ್ಯ ಎಂದು ಖಡಕ್ ಆಗಿ ಹೇಳಿದ್ದಾರೆ.

NEWS DESK

TIMES OF BENGALURU