ಪಾದದಲ್ಲಿ ಚಿನ್ನವಿಟ್ಟ ಖದೀಮನ ಬಂಧನ

ಬೆಂಗಳೂರು: ಪ್ರಯಾಣಿಕನೊಬ್ಬ ತನ್ನ ಪಾದದಡಿಯಲ್ಲಿ ಚಿನ್ನವನ್ನಿಟ್ಟುಕೊಂಡು ಬಂದಿದ್ದು, ಅನುಮಾನಗೊಂಡ     ಏರ್‌ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳ ಆರೋಪಿಯನ್ನು ವಶಪಡಿಸಿಕೊಂಡಿದ್ದಾರೆ. ಈ ಘಟನೆ ಇಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಬಂಧಿತನಿಂದ 5.42 ಲಕ್ಷ ರೂ. ಮೌಲ್ಯದ ಚಿನ್ನವನ್ನ ವಶಪಡಿಸಿಕೊಳ್ಳಲಾಗಿದೆ. ಆರೋಪಿ ದುಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ವೇಳೆ ಕಸ್ಟಮ್ಸ್ ಅಧಿಕಾರಿಗಳ ಕಣ್ತಪ್ಪಿಸಲು ಪಾದದಲ್ಲಿ ಚಿನ್ನವಿಟ್ಟು ಬ್ಯಾಂಡೆಜ್ ಹಾಕಿದ್ದ ಎಂದು ತಿಳಿದು ಬಂದಿದೆ.

NEWS DESK

TIMES OF BENGALURU