ಲಾಕ್ ಡೌನ್ ಹೊರತುಪಡಿಸಿ ಕಠಿಣ ಕ್ರಮ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಹೊರತುಪಡಿಸಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಿನ್ನೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಉನ್ನತ ಮಟ್ಟದ ಅಧಿಕಾರಿಗಳ ಜೊತೆ ಸಭೆ ಮಾಡಿದ್ದಾರೆ. ರಾಜ್ಯದಲ್ಲಿ ಸೋಂಕು, ಸಾವಿನ ಪ್ರಮಾಣವೂ ಹೆಚ್ಚಾಗುತ್ತಿದೆ. ಸಾವಿನ ಪ್ರಮಾಣ ಕಳೆದ ವರ್ಷದಷ್ಟೇ ಆಗುತ್ತಿದೆ. ಈ ನಿಟ್ಟಿನಲ್ಲಿ ಸಿಎಂ ಸಭೆ ಮಾಡಿದ್ದಾರೆ. ಲಾಕ್ ಡೌನ್ ಹೊರತುಪಡಿಸಿ ಬಿಗಿಯಾದ ಕ್ರಮ ತೆಗೆದುಕೊಳ್ಳಬೇಕಾಗಿದೆ ಎಂದು ಹೇಳಿದ್ದಾರೆ.

NEWS DESK

TIMES OF BENGALURU