ಮುಷ್ಕರಕ್ಕೆ ಬೆಂಬಲ ನೀಡುವಂತೆ ಯಶ್‍ಗೆ ಪತ್ರ

ಬೆಂಗಳೂರು : ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರ ಮುಷ್ಕರ 8 ನೇ ದಿನಕ್ಕೆ ಕಾಲಿಟ್ಟಿದ್ದು, ಈ ವೇಳೆ ಸ್ಯಾಂಡಲ್ ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಅವರು ತಮ್ಮ ಮುಷ್ಕರಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿರುವ ಪತ್ರವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಕರ್ನಾಟಕ ರಾಜ್ಯ ಸಾರಿಗೆ ನೌಕರರ ಒಕ್ಕೂಟದ ಹೆಸರಿನಲ್ಲಿ ಪತ್ರ ಬರೆಯಲಾಗಿದ್ದು, ನಿಮ್ಮ ತಂದೆಯವರು ಬಿಎಂಟಿಸಿ ನಿವೃತ್ತ ಚಾಲಕರು ಹೀಗಾಗಿ ಸಾರಿಗೆ ನೌಕರರ ಕುಟುಂಬದ ಹಿನ್ನೆಲೆಯುಳ್ಳ ನೀವು ಸಾರಿಗೆ ನೌಕರರ ಮುಷ್ಕರಕ್ಕೆ ಬೆಂಬಲ ನೀಡಬೇಕೆಂದು ಮನವಿ ಮಾಡಲಾಗಿದೆ.

ಇನ್ನು ಈ ಪತ್ರವು ಯಾವುದೇ ಅಧಿಕೃತ ಮುದ್ರೆಯಾಗಲಿ, ಸಹಿಯನ್ನಾಗಲಿ ದಿನಾಂಕವನ್ನಾಗಲಿ ಹೊಂದಿಲ್ಲ. ನಿಮ್ಮ ತಂದೆ ಅವರ ಅನುಭವ, ನೋವನ್ನು ನಿಮ್ಮ ಜೊತೆ ಹಂಚಿಕೊಂಡಿರಬಹುದು. ನೀವು ಸಮಾಜಸೇವೆಯಲ್ಲಿ ಗುರುತಿಸಿಕೊಂಡಿದ್ದೀರಿ ಈಗ ನಮಗೆ ಬೆಂಬಲಿಸಿ ಎಂಬ ಬೇಡಿಕೆಯನ್ನು ಸಲ್ಲಿಸಲಾಗಿದೆ.

NEWS DESK

TIMES OF BENGALURU