ಮಳೆಯಿಂದ ತಂಪಾಯ್ತು ಸಿಲಿಕಾನ್ ಸಿಟಿ

ಬೆಂಗಳೂರು : ರಾಜ್ಯಾದ್ಯಂತ ನಿನ್ನೆ ಭಾರೀ ಮಳೆಯಾಗಿದ್ದು, ಇಂದು ಕೂಡ ವರುಣನ ಆರ್ಭಟ ಮುಂದುವರೆಯಲಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಮಳೆಯ ಆರ್ಭಟ ಜೋರಾಗಿದ್ದು, ನಿನ್ನೆ ಸುರಿದ ಮಳೆಯಿಂದ ಬೆಂಗಳೂರು ತಂಪಾಗಿದೆ. ಬೆಂಗಳೂರಿನಲ್ಲಿ ಇನ್ನೂ 3 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ನಿನ್ನೆ ಮಧ್ಯಾಹ್ನ 3 ಗಂಟೆಯಿಂದ ಶುರುವಾದ ಮಳೆ ರಾತ್ರಿಯವರೆಗೂ ಸುರಿದಿದೆ.

ಇಂದು ಮುಂಜಾನೆಯಿಂದಲೇ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ಬಳಿಕ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರು ದಕ್ಷಿಣ ಭಾಗದಲ್ಲೇ ಹೆಚ್ಚು ಮಳೆಯಾಗಿದ್ದು, ಜಯನಗರ, ಬಿಟಿಎಂ ಲೇಔಟ್, ಹೊಯ್ಸಳ ನಗರದಲ್ಲಿ ಆಧಿಕ ಮಳೆಯಾಗಿದೆ. ಬೆಂಗಳೂರಲ್ಲಿ ಇನ್ನೂ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

NEWS DESK

TIMES OF BENGALURU