ಬೆಂಗಳೂರು: ಕೊರೊನಾವೈರಸ್ ಎರಡನೇ ಅಲೆಯ ಭೀತಿ ನಡುವೆ ಬೆಂಗಳೂರಿನ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯವಿರುವ ರೆಮಿಡಿಸ್ವಿರ್ ಔಷಧಿಯ ಲಭ್ಯತೆಯಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಟ್ವೀಟ್ ಮೂಲಕ ಉತ್ತರ ನೀಡಿದ್ದಾರೆ.
ರೆಮಿಡಿಸ್ವಿರ್ ಔಷಧದ ಸಮರ್ಪಕ ಪೂರೈಕೆಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅನ್ನು ನೋಡಲ್ ಏಜೆನ್ಸಿಯಾಗಿ ನಿಯೋಜಿಸಲಾಗಿದ್ದು, ಸರ್ಕಾರಿ ಆಸ್ಪತ್ರೆಗಳಿಗೆ ಹಾಗೂ ಸರ್ಕಾರ ಶಿಫಾರಸ್ಸು ಮಾಡಿರುವ ಸೋಂಕಿತರ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳಿಗೆ ಅವಶ್ಯಕ ರೆಮಿಡಿಸ್ವಿರ್ ಔಷಧ ಸರಬರಾಜು ಮಾಡಲು ಎಸ್ಎಎಸ್ಟಿಗೆ ಹೊಣೆಗಾರಿಕೆ ನೀಡಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
NEWS DESK
TIMES OF BENGALURU