ಕೊರೊನಾ ವಿಫಲತೆಗೆ ಸಿಎಂ ನೇರ ಹೊಣೆ

ಬೆಂಗಳೂರು: ಕೊರೊನಾ ನಿಯಂತ್ರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಖಾಸಗಿ ಆಸ್ಪತ್ರೆಗಳ ಪಾಳೆಗಾರಿಕೆ ಹೆಚ್ಚಾಗಿದೆ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದರು. ಡಾ.ಬಿ.ಆರ್.ಅಂಬೇಡ್ಕರ್ ಅವರ 130ನೆ ದಿನಾಚರಣೆ ಅಂಗವಾಗಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಕೊರೊನಾ ವಿಫಲತೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನೇರವಾಗಿ ಕಾರಣ. ಆರೋಗ್ಯ ಸಚಿವ ಸುಧಾಕರ್ ಅವರು ಬುರುಡೆ ಬಿಡುತ್ತಿದ್ದಾರೆ. ಬರೀ ಮಾತುಗಳಿಂದ ಸಾಂಕ್ರಾಮಿಕ ರೋಗ ನಿಯಂತ್ರಿಸಲು ಸಾಧ್ಯವಿಲ್ಲ. ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಅವರು ಹೇಳಿದರು.

NEWS DESK

TIMES OF BENGALURU