ಕೋವಿಡ್ ಚಿಕಿತ್ಸೆ; ಬಿಬಿಎಂಪಿಯಿಂದ ಸಾಲು ಸಾಲು ಸಭೆ

ಬೆಂಗಳೂರು: ನಗರದಲ್ಲಿ ಕೋವಿಡ್ ಪ್ರಕರಣಗಳು ಭಾರಿ ಪ್ರಮಾಣದಲ್ಲಿ ಹೆಚ್ಚಳ ಕಾಣಿಸುತ್ತಿರುವುದು, ಸೋಂಕಿತರ ಚಿಕಿತ್ಸೆಗೆ ಹಾಸಿಗೆಗಳ ತೀವ್ರ ಕೊರತೆ ಉಂಟಾಗುವ ಆತಂಕ ಸೃಷ್ಟಿಸಿದೆ. ಹಾಗಾಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಹಾಸಿಗೆಗಳ ಸಂಖ್ಯೆ ಹೆಚ್ಚಿಸುವುದಕ್ಕೆ ಬಿಬಿಎಂಪಿ ಹರಸಾಹಸ ಪಡುತ್ತಿದೆ.

ಇದುವರೆಗೆ 100ಕ್ಕಿಂತ ಹೆಚ್ಚು ಹಾಸಿಗೆ ಸಾಮಥ್ರ್ಯವಿರುವ ಆಸ್ಪತ್ರೆಗಳು ಶೇ 50ರಷ್ಟು ಹಾಸಿಗೆಗಳನ್ನು ಕೋವಿಡ್ ಚಿಕಿತ್ಸೆಗೆ ಕಾಯ್ದಿರಿಸುವುದನ್ನು ಬಿಬಿಎಂಪಿ ಕಡ್ಡಾಯಗೊಳಿಸಿತ್ತು. ಈಗ 50ಕ್ಕಿಂತ ಹೆಚ್ಚು ಹಾಸಿಗೆಗಳನ್ನು ಹೊಂದಿರುವ ಆಸ್ಪತ್ರೆಗಳಲ್ಲೂ ಶೇ 50ರಷ್ಟು ಹಾಸಿಗೆಗಳನ್ನು ಕೋವಿಡ್ ರೋಗಿಗಳ ಚಿಕಿತ್ಸೆಗೆ ಕಾಯ್ದಿರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

NEWS DESK

TIMES OF BENGALURU