ಜ್ವರದಿಂದ ಬಳಲುತ್ತಿದ್ದ ಸಿಎಂ ಆರೋಗ್ಯದಲ್ಲಿ ಚೇತರಿಕೆ

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವ್ರು ಲೋಕಸಭಾ ಕ್ಷೇತ್ರದ ಉಪ ಚುನಾವಣಾ ಅಭ್ಯರ್ಥಿ ಮಂಗಳಾ ಅಂಗಡಿ ಅವರ ಪರ ಮತ ಯಾಚನೆಗಾಗಿ ಬೆಳಗಾವಿ ಬಂದಿದ್ರು. ಆದ್ರೆ, ನಿನ್ನೆ ಸಾಯಂಕಾಲ ಅವ್ರಿಗೆ ಇದ್ದಕ್ಕಿದ್ದಂತೆ ಜ್ವರ, ಸುಸ್ತು ಕಂಡು ಬಂದ ಹಿನ್ನೆಲೆಯಲ್ಲಿ ತಾವು ಉಳಿದುಕೊಂಡಿರುವ ಕೊಲ್ಲಾಪುರ ವೃತ್ತದಲ್ಲಿರುವ ಖಾಸಗಿ ಹೊಟೇಲ್’ನಲ್ಲಿಯೇ ಕೆಲಕಾಲ ವಿಶ್ರಾಂತಿ ಪಡೆದರು.

ಇಂದು ಬೆಳಗ್ಗೆಯೇ ಕೆಎಲ್ ಇ ಆಸ್ಪತ್ರೆಯ ತಜ್ಞ ವೈದ್ಯರ ತಂಡ ಸಿಎಂರನ್ನ ತೀವ್ರ ತಪಾಸಣೆ ನಡೆಸಿತು. ಸದ್ಯಕ್ಕೆ ಅವರ ಆರೋಗ್ಯ ಸ್ಥಿತಿ ಸುಧಾರಿಸಿದ್ದು ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.

NEWS  DESK

TIMES OF BENGALURU