45 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆ ಪಡೆಯಿರಿ

ಬೆಂಗಳೂರು : ಕೊರೊನಾ ಸೋಂಕಿನ ನಿಯಂತ್ರಣಕ್ಕೆ ರಾಜ್ಯಪಾಲ ವಜುಭಾಯಿವಾಲಾ ಅವರು ಎರಡನೇ ಹಂತದ ಲಸಿಕೆಯನ್ನು ಇಂದು ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಪಡೆದುಕೊಂಡಿದ್ದಾರೆ.

ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಬಿ.ಆರ್.ವೆಂಕಟೇಶಯ್ಯ ಅವರ ಉಸ್ತುವಾರಿಯಲ್ಲಿ ಶುಶ್ರೂಷಕರಾದ ವೇದಾ ಅವರು ರಾಜ್ಯಪಾಲರಿಗೆ ಕೋವಿಶೀಲ್ಡ್‍ನ ಎರಡನೇ ಹಂತದ ಲಸಿಕೆ ನೀಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯಪಾಲರು, ಕೊರೊನಾ ಸೋಂಕಿನ ನಿಯಂತ್ರಣಕ್ಕೆ ರಾಜ್ಯದ ನಾಗರೀಕರು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. 45 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆ ಪಡೆಯಬೇಕು ಎಂದು ಕರೆ ನೀಡಿದ್ದಾರೆ.

NEWS DESK

TIMES OF BENGALURU