ಕೊರೊನಾ ಸೋಂಕಿಗೆ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಹೈಕೋರ್ಟ್ ಸೂಚನೆ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ, ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ವಿಭಾಗೀಯ ಪೀಠ ಇಂದು ಗೀತಾ ಮಿಶ್ರಾ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿ ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆ ಉಲ್ಲಂಘಿಸಿದರೆ ಎಫ್‍ಐಆರ್ ದಾಖಲಿಸುವಂತೆ ಆದೇಶ ನೀಡಿದ್ದು, ಈ ಸಂಬಂಧ ಎಲ್ಲ ಪೊಲೀಸ್ ಠಾಣೆಗಳಿಗೆ ನಿರ್ದೇಶನ ನೀಡುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದೆ.

NEWS DESK

TIMES OF BENGALURU