ಬೋರ್ಡ್ ಪರೀಕ್ಷೆಗಳ ಬಗ್ಗೆ ತೀರ್ಮಾನ ಕೈಗೊಂಡಿಲ್ಲ

ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿವೆ. ಇದೇ ಸಂದರ್ಭದಲ್ಲಿ ರಾಜ್ಯದಲ್ಲಿನ ವಿವಿಧ ಪರೀಕ್ಷೆ ಕುರಿತಂತೆ ಇಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸೇರಿದಂತೆ ಪಿಯು ಬೋರ್ಡ್ ನಿರ್ದೇಶಕರನ್ನೊಳಗೊಂಡ ಅಧಿಕಾರಿಗಳ ಮಹತ್ವದ ಸಭೆಯನ್ನು ನಡೆಸಿದರು.

ಬಳಿಕ ಮಾತನಾಡಿದ ಅವರು, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರು, 1 ರಿಂದ 9ನೇ ತರಗತಿ ಪರೀಕ್ಷೆ ನಡೆಸೋ ವಿಚಾರ ಕುರಿತಂತೆ ಇನ್ನೆರಡು ದಿನಗಳಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ. ರಾಜ್ಯದಲ್ಲಿ ಪರೀಕ್ಷೆ ನಡೆಸ ಬೇಕೇ, ಬೇಡವೇ ಎನ್ನುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ.

ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳ ಬಗ್ಗೆ ಇನ್ನೂ ಸಾಕಷ್ಟು ಸಮಯವಿದೆ. ಪರೀಕ್ಷೆ ನಡೆಸಬೇಕೆ ಅಥವಾ ಬೇಡವೇ ಎನ್ನುವ ಬಗ್ಗೆ ಈಗ ತೀರ್ಮಾನ ಕೈಗೊಳ್ಳುವುದಿಲ್ಲ. ಪರಿಸ್ಥಿತಿ ನೋಡಿಕೊಂಡು, ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ. ಈಗ ಬೋರ್ಡ್ ಪರೀಕ್ಷೆಗಳ ಕುರಿತಂತೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ತಿಳಿಸಿದರು.

NEWS DESK

TIMES OF BENGALURU