ಅಧ್ಯಯನ ಪ್ರವಾಸ ಕೈಗೊಳ್ಳದಂತೆ ಸೂಚನೆ

ಬೆಂಗಳೂರು : ಕೋವಿಡ್ ಎರಡನೇ ಅಲೆ ದೇಶದಲ್ಲಿ ವ್ಯಾಪಕವಾಗಿ ಅರಡುತ್ತಿರುವ ಹಿನ್ನೆಲೆಯಲ್ಲಿ ವಿಧಾನಮಂಡಲ ಹಾಗೂ ವಿಧಾನಸಭೆಯ ವಿವಿಧ ಸಮಿತಿಗಳು ರಾಜ್ಯದೊಳಗೆ ಹಾಗೂ ಹೊರ ರಾಜ್ಯಗಳಲ್ಲಿ ಯಾವುದೇ ಅಧ್ಯಯನ ಪ್ರವಾಸವನ್ನು ಕೈಗೊಳ್ಳದಂತೆ ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಆದೇಶಿಸಿದ್ದಾರೆ.

ಎಲ್ಲಾ ಸಮಿತಿಗಳು ಮುಂದಿನ ಆದೇಶದವರೆಗೆ ರಾಜ್ಯದೊಳಗೆ ಅಥವಾ ಹೊರ ರಾಜ್ಯಗಳಲ್ಲಿ ಯಾವುದೇ ಅಧ್ಯಯನ ಪ್ರವಾಸ ಕೈಗೊಳ್ಳಬಾರದು. ಸ್ಥಳೀಯವಾಗಿ ಯಾವುದೇ ಭೇಟಿ ಅಥವಾ ಸ್ಥಳ ಭೇಟಿಯನ್ನೂ ಮಾಡಬಾರದು ಎಂದು ಸಭಾಧ್ಯಕ್ಷರು ಆದೇಶಿಸಿರುವುದಾಗಿ ಅಧಿಕೃತ ಪ್ರಕಟಣೆ ತಿಳಿಸಿದೆ.

NEWS DESK

TIMES OF BENGALURU