ವರ್ಕ್ ಫ್ರಮ್ ಹೋಮ್ ಕೆಲಸ ಮಾಡಿ

ಬೆಂಗಳೂರು: ಸಾಧ್ಯವಿರುವ ಕಡೆಗಳಲ್ಲೆಲ್ಲ ಮನೆಯಿಂದ ಕೆಲಸ ಮಾಡುವ ವ್ಯವಸ್ಥೆ ಮಾಡಿ. 45 ವರ್ಷಕ್ಕಿಂತ ಹೆಚ್ಚು ವಯಸ್ಸಾದವರು ಕೋವಿಡ್-19 ಲಸಿಕೆ ಪಡೆಯುವಂತೆ ನೋಡಿಕೊಳ್ಳಿ’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಉದ್ಯಮ ವಲಯಕ್ಕೆ ಸಲಹೆ ನೀಡಿದರು.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯು (ಎಫ್‌ಕೆಸಿಸಿಐ) ಕೋವಿಡ್‌-19 ಪರಿಸ್ಥಿತಿಯ ಕುರಿತು ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಗುರುವಾರ ಮಾತನಾಡಿದ ಅವರು, ‘ಆರ್ಥಿಕತೆ ಚೇತರಿಕೆ ಕಾಣುತ್ತಿರುವ ಸಂದರ್ಭದಲ್ಲಿ ಕೊರೊನಾ ಎರಡನೇ ಅಲೆ ಬಂದಿದೆ. ಇದನ್ನು ನಿಯಂತ್ರಿಸಲು ಸರ್ಕಾರ ಎಲ್ಲ ಪ್ರಯತ್ನಗಳನ್ನೂ ನಡೆಸುತ್ತಿದೆ. ಕೈಗಾರಿಕೆ, ಸೇವಾ ವಲಯ ಹಾಗೂ ವ್ಯಾಪಾರಸ್ಥರು ಸರ್ಕಾರದೊಂದಿಗೆ ಕೈಜೋಡಿಸಬೇಕು’ ಎಂದು ಮನವಿ ಮಾಡಿದರು.

NEWS DESK

TIMES OF BENGALURU