ಲಾಕ್ ಡೌನ್ ಬಗ್ಗೆ ಸ್ಪಷ್ಟ ಮಾಹಿತಿ ನೀಡಬೇಕು

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಬಗ್ಗೆ ಸರ್ಕಾರ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಹೇಳಿಕೆ ನೀಡುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ.

ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಘಟಕ, ಲಾಕ್ ಡೌನ್ ಬಗ್ಗೆ ಸರ್ಕಾರ ಅಡ್ಡ ಗೋಡೆ ಮೇಲೆ ದೀಪವಿಟ್ಟಂತೆ ದ್ವಂಧ್ವ ಹೇಳಿಕೆಗಳನ್ನು ನೀಡದೆ ಸ್ಪಷ್ಟ ಸಂದೇಶವನ್ನು ರಾಜ್ಯಕ್ಕೆ ನೀಡಬೇಕು. ಲಾಕ್‍ಡೌನ್ ಕರೊನಗಿಂತಲೂ ಭೀಕರವಾದುದು ಎನ್ನುವ ಕಹಿಸತ್ಯ ಹಿಂದಿನ ಅನುಭವದಿಂದ ತಿಳಿದಿದೆ. ವಲಸೆ ಕಾರ್ಮಿಕರಿಂದ ಹಿಡಿದು ಕೈಗಾರಿಕೆಗಳು, ಕಂಪೆನಿಗಳವರೆಗೆ ಲಾಕ್‍ಡೌನ್‍ಗೆ ಒಗ್ಗುವುದು ಕಷ್ಟಕರವಾಗಲಿದೆ ಎಂದು ಹೇಳಿದೆ.

NEWS DESK

TIMES OF BENGALURU